ಭಗವದ್ಗೀತಾ ಅಭಿಯಾನದ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆಯ ಪಾಠ, ಪ್ರವಚನ, ಕಂಠಪಾಠ ಸ್ಪರ್ಧೆ.ಅ. 25ರಂದು
Автор: Namma Sahyadri News
Загружено: 2025-10-18
Просмотров: 67
Sri Bhagavad Gita Campaign. Bhagavad Gita lessons, lectures, memorization and competitions in state schools and colleges
#Namma Sahyadri News.
#namma sahyadri news.
#News in Shivamogga.
#news in Shimoga.
#news in Shivamogga.
#Sri Bhagavad Gita Campaign.
#ಶ್ರೀ ಭಗವದ್ಗೀತಾ ಅಭಿಯಾನದ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆಯ ಪಾಠ, ಪ್ರವಚನ, ಕಂಠಪಾಠ ಹಾಗೂ ಸ್ಪರ್ಧೆಗಳು.
#Sri Bhagavad Gita Campaign. Bhagavad Gita lessons, lectures, memorization and competitions in state schools and colleges.
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಇದರ ಪೀಠಾಧೀಶರಾದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪದಂತೆ, ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಉದ್ಘಾಟನಾ ಸಮಾರಂಭ ಅಕ್ಟೋಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಅಭಿಯಾನದ ಉದ್ದೇಶ ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವುದಾಗಿದೆ. ಮಾಜಿ ಉಪಮುಖ್ಯಮಂತ್ರಿ ಶ್ರೀ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಪರಮಪೂಜ್ಯರುಗಳಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಪ್ರಸನ್ನನಾಥ ಸ್ವಾಮಿಗಳು ಬಸವ ಮರುಳಸಿದ್ದ ಸ್ವಾಮಿಗಳು ಸೇರಿದಂತೆ ಅನೇಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಗಣ್ಯರು ಸಾನ್ನಿಧ್ಯ ವಹಿಸಲಿದ್ದಾರೆ.
ಈ ಅಭಿಯಾನದಡಿ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆಯ ಪಾಠ, ಪ್ರವಚನ, ಕಂಠಪಾಠ ಹಾಗೂ ಸ್ಪರ್ಧೆಗಳು ನಡೆಯಲಿವೆ. ಜೈಲು ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಮಹಾ ಅಭಿಯಾನ ನವೆಂಬರ್ 30, 2025ರಂದು ಮಹಾಸಮರ್ಪಣೆಯೊಂದಿಗೆ ಭಾಗವಹಿಸುವಂತೆ ವಿನಂತಿಸಲಾಗಿದೆ.
Доступные форматы для скачивания:
Скачать видео mp4
-
Информация по загрузке: