ಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾನೆಯ ಕಟ್ಟಿದೆ-ಬಸವಣ್ಣನವರು. (ಅನುಭವ ಮಂಟಪವ ಕಟ್ಟಿದೆ)
Автор: ಅನುಭವ ಮಂಟಪ ಟಿವಿ Anubhava Mantapa TV
Загружено: 2025-04-02
Просмотров: 111
ಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾನೆಯ ಕಟ್ಟಿದೆ-ಬಸವಣ್ಣನವರು ((ಅನುಭವ ಮಂಟಪವ ಕಟ್ಟಿದೆ)
ಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾಮನೆಯ ಕಟ್ಟಿದೆ, ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು. ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ, ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು
ಮರ್ತ್ಯಲೋಕದ ಮಹಾಮನೆ ಹಾಳಾಗಿ ಹೋಗಬಾರದೆಂದುಕರ್ತನಟ್ಟಿದನಯ್ಯಾ ಒಬ್ಬ ಶರಣನ !ಆ ಶರಣ ಬಂದು ಕಲ್ಯಾಣವೆಂಬ ಶಿವಪುರವ ಕೈಲಾಸವ ಮಾಡಿರುದ್ರಗಣ ಪ್ರಮಥಗಣಂಗಳೆಲ್ಲರ ಹಿಡಿತಂದು ಅಮರಗಣಂಗಳೆಂದು ಹೆಸರಿಟ್ಟು ಕರೆದು,ಅಗಣಿತಗಣಂಗಳೆಲ್ಲರ ಹಿಡಿತಂದು, ಅಸಂಖ್ಯಾತರೆಂಬ ಹೆಸರಿಟ್ಟು ಕರೆದು,ಭಕ್ತಿಯ ಕುಳಸ್ಥಲವ ಶ್ರುತದೃಷ್ಟಪವಾಡದಿಂದ ಮರೆದು ತೋರಿ,ಜಗವರಿಯಲು ಶಿವಾಚಾರವ ಧ್ವಜವನೆತ್ತಿಸಿಮರ್ತ್ಯಲೋಕ ಶಿವಲೋಕವೆರಡಕ್ಕೆ ನಿಚ್ಚಿಣಿಗೆಯಾದನು.ಆ ಶಿವಶರಣನ ಮನೆಯೊಳಗಿಪ್ಪ ಶಿವಗಣಂಗಳ ತಿಂಥಿಣಿಯ ಕಂಡು,ಎನ್ನಮನ ಉಬ್ಬಿಕೊಬ್ಬಿ ಓಲಾಡುತ್ತಿದ್ದೆನಯ್ಯಾ !ನಮ್ಮ ಗುಹೇಶ್ವರನ ಶರಣ ಸಂಗನಬಸವಣ್ಣನದಾಸೋಹದ ಘನವನೇನೆಂದೆನಬಹುದು ನೋಡಾ ಸಿದ್ಧರಾಮಯ್ಯಾ.
ಸಮಗ್ರ ವಚನ ಸಂಪುಟ: 2 ವಚನದ ಸಂಖ್ಯೆ: 1454
ಆದಿಯ ಲಿಂಗವ ಮೇದಿನಿಗೆ ತಂದು,ಮರ್ತ್ಯಲೋಕದಲ್ಲಿ ಮಹಾಮನೆಯ ಕಟ್ಟಿದನಯ್ಯಾ ಸಂಗನಬಸವಣ್ಣನು.ಆ ಮನೆಯ ನೋಡಲೆಂದು ಹೋದಡೆ,ಆ ಗೃಹ ಹೋಗದ ಮುನ್ನವೆ ಎನ್ನ ನುಂಗಿತ್ತಯ್ಯಾ !ಅದಕ್ಕೆ ಕಂಭ ಒಂದು, ತೊಲೆ ಆರು, ಜಂತೆವಲಗೆ ಮೂವತ್ತಾರು
............................................
ಪ್ರಮಥಗಣಂಗಳೆಲ್ಲರೂ ಆತನ ಒಕ್ಕುದ ಕೊಳಲೆಂದು ಬಂದು,ಆ ಮನೆಯ ಹೊಕ್ಕು ನಿಶ್ಚಿಂತನಿವಾಸಿಗಳಾದರು.ಗುಹೇಶ್ವರನ ಶರಣ ಸಂಗನಬಸವಣ್ಣನ ಮಹಾಮನೆಯ ಕಂಡುಧನ್ಯನಾದೆನು ಕಾಣಾ ಸಿದ್ಧರಾಮಯ್ಯಾ. 2/892
ಬಸವಣ್ಣ ಮತ್ರ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ,ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲುಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ.ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ.ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು
ಸಮಗ್ರ ವಚನ ಸಂಪುಟ: 3 ವಚನದ ಸಂಖ್ಯೆ: 1384
Доступные форматы для скачивания:
Скачать видео mp4
-
Информация по загрузке: