ಕರ್ನಾಟಕ ರಾಜ್ಯೋತ್ಸವ । ಸಾಹಿತ್ಯ ಸಂಭ್ರಮ ೨೦೨೩ । ಕವಿ-ಕಾವ್ಯ ನಮನ । EP5 ಉಭಯ ಕವಿಚಕ್ರವರ್ತಿ ಪೊನ್ನ
Автор: Sirigannadakoota Munich e.V.
Загружено: 2023-12-24
Просмотров: 86
ವಿಮರ್ಶಕರು ಪೊನ್ನನ ಕಾಲವನ್ನು ಸುಮಾರು ಕ್ರಿ.ಶ. ೯೫೦ ಎಂದು ಪರಿಗಣಿಸಿದ್ದಾರೆ. ಪೊನ್ನನು ಜನ್ಮತ ಒಬ್ಬ ಜೈನ, ಕಮ್ಮನಾಡಿನ ವೆಂಗಿಬಿಷಯ ಎಂಬ ಪ್ರಾಂತ್ಯಕ್ಕೆ ಸೇರಿದವನು. ಇದು ಈಗಿನ ಆಂಧ್ರದ ಚಿತ್ತೂರು ಜಿಲ್ಲೆಯ ಪುಂಗನೂರು ಪ್ರದೇಶದಿಂದ ಈಗಿನ ಗುಲ್ಬರ್ಗಾ ಜಿಲ್ಲೆಗೆ ಸೇರಿದ ರಾಷ್ಟ್ರಕೂಟರ ರಾಜಧಾನಿಯಾದ ಮಾನ್ಯಖೇತಕ್ಕೆ ವಲಸೆ ಬಂದನೆಂದು ವಿದ್ವಾಂಸರ ಅಭಿಪ್ರಾಯವಾಗಿದೆ.
ಇಂದ್ರನಂದಿಮುನಿ ತನ್ನ ವಿದ್ಯಾಗುರುವೆಂದೂ, ಜಿನಚಂದ್ರ ಮುನೀಂದ್ರ ತನ್ನ ಧಾರ್ಮಿಕ ಗುರುವೆಂದೂ ಪೊನ್ನ ಶಾಂತಿಪುರಾಣದಲ್ಲಿ ಹೇಳಿಕೊಂಡಿದ್ದಾನೆ.ಪೊನ್ನ ರಾಷ್ಟ್ರಕೂಟರ ದೊರೆ ಮುಮ್ಮಡಿ ಕೃಷ್ಣನ ಆಶ್ರಯದಲ್ಲಿದ್ದು “ಉಭಯಕವಿ ಚಕ್ರವರ್ತಿ” ಎಂಬ ಬಿರುದನ್ನು ಪಡೆದಿದ್ದ. ಈತ ಕವಿ, ಗಮಕಿ, ವಾದಿ, ವಾಗ್ಮಿಯಾಗಿದ್ದನೆಂದೂ ಸರ್ವದೇವ ಕವೀಂದ್ರನೆಂಬ ಬಿರುದು ಪಡೆದಿದ್ದುದಾಗಿಯೂ ತಿಳಿದುಬರುತ್ತದೆ.
ಪೊನ್ನನ ಹೆಸರಿನಲ್ಲಿರುವ ಕೃತಿಗಳೆಂದರೆ : ಶಾಂತಿಪುರಾಣ, ಭುವನೈಕ ರಾಮಾಭ್ಯುದಯ, ಜಿನಾಕ್ಷರ ಮಾಲೆ, ಗತಪ್ರತ್ಯಾಗತ, ಅಲಂಕಾರ, ಆದಿಪುರಾಣಮು, ವಿರಾಟಮು. ಇವುಗಳಲ್ಲಿ ಶಾಂತಿಪುರಾಣ ಮತ್ತು ಜಿನಾಕ್ಷರ ಮಾಲೆಗಳೂ ಉಪಲಬ್ದವಿದ್ದು ಉಳಿದವು ಕಾಲಗರ್ಭದಲ್ಲಿ ಅಡಗಿಹೋಗಿವೆ.
ಭುವನೈಕರಾಮಾಭ್ಯುದಯವನ್ನು
Credits: http://www.jainheritagecentres.com
Доступные форматы для скачивания:
Скачать видео mp4
-
Информация по загрузке: