ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಚರ್ಚೆ ; ಕೇಂದ್ರದೊಂದಿಗೆ ಎಚ್.ಡಿ. ಕುಮಾರಸ್ವಾಮಿ ಚರ್ಚೆ
Автор: DD Chandana News
Загружено: 2025-12-03
Просмотров: 19614
ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದರು.
ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯದ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ಕಾರ್ಯಕರ್ತೆಯರ ಪ್ರಮುಖರನ್ನು ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದರು. ನೌಕರರ ಪರವಾಗಿ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
FRS ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ವೇಳೆ ಅನ್ನಪೂರ್ಣದೇವಿ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಗೆ ನಿಯೋಜಿಸದಿರುವ ಬಗ್ಗೆ ಚುನಾವಣೆ ಆಯೋಗದೊಂದಿಗೆ ಚರ್ಚೆ ನಡೆಸಲಾಗುವುದು. ಎಲ್ಲಾ ನೌಕರರಿಗೂ ಕೆಲಸದ ಒತ್ತಡ ಕಡಿಮೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವ್ಯಾಪ್ತಿಗೆ ಬರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು. ಮಾನವೀಯ ನೆಲೆಗಟ್ಟಿನ ಅಡಿ ಬೇಡಿಕೆಗಳ ಈಡೇರಿಕೆಗೆ ಪರಿಶೀಲನೆ ನಡೆಸಲಾಗುವುದು ಎಂದರು.
ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ನೌಕರರ ಪ್ರಮುಖರನ್ನು ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ, ಮನವಿಗೆ ಓಗೊಟ್ಟು ಪ್ರತಿಭಟನೆ ಕೊನೆಗೊಳಿಸಿ ದೆಹಲಿಗೆ ಬಂದಿರುವುದು ಸ್ವಾಗತಾರ್ಹ ಎಂದು ಹೇಳಿದರು.
#LiveDDChandanaNews #DDChandanaNews #DDChandana #DDKannada
Доступные форматы для скачивания:
Скачать видео mp4
-
Информация по загрузке: