ರಾಮಧಾನ್ಯ ಚರಿತ್ರೆ - ಕನಕದಾಸ [ರಾಗಿ ಮತ್ತು ಭತ್ತದ ನಡುವಿನ ಸಂಭಾಷಣೆ]# Ramadhanya charite - Kanaka Dasa
Автор: Panchajanya Kannada Class
Загружено: 2024-12-14
Просмотров: 13879
ರಾಮಧಾನ್ಯ ಚರಿತ್ರೆ ಸಾರಾಂಶ:-
"ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ.
ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು.
ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ ಜಗಳವೇರ್ಪಡುವುದು.
ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ ಇವರಿಬ್ಬರನ್ನೂ ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು ಯಾವ ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ.
[ನವಧಾನ್ಯಗಳು:- ನರೆದಲೆಗ(ರಾಗಿ), ನೆಲ್ಲು(ವ್ರೀಹಿ), ಹಾರಕ, ಬರಗು, ಜೋಳ, ಕಂಬು, ಸಾಮೆ, ಉರುತರ, ನವಣೆ ನವಧಾನ್ಯ]
Доступные форматы для скачивания:
Скачать видео mp4
-
Информация по загрузке: