ಶ್ರೀದೇವಿ ಮಹಾತ್ಮೆ ಅಥವಾ ಮಹಿಷಾಸುರ ಮರ್ದಿನಿ l ಲಿಂಗಪಟ್ಟಣ್ಣ ಹಲಗೂರು ಹೊಬಳಿ ಮಳವಳ್ಳಿ ತಾಲೂಕು l
Автор: Pragathi Digital Studio Mandya
Загружено: 2025-11-26
Просмотров: 355
ಶ್ರೀ ಬಸವೇಶ್ವರ ಕೃಪಾಪೋಸಿತ ನಾಟಕ ಮಂಡಳಿ ಲಿಂಗಪಟ್ಟಣ ಹಲಗೂರು ಹೋಬಳಿ, ಮಳವಳ್ಳಿ ತಾಲೂಕು, ಮಂಡ್ಯ ಜಿಲ್ಲೆ ದಿನಾಂಕ 25.11.2025ನೇ ಮಂಗಳವಾರ ಬೆಳಿಗ್ಗೆ 11:00 ಗಂಟೆಗೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶ್ರೀ ಪುಟ್ಟಸ್ವಾಮಚಾರ್ ಲಿಂಗಪಟ್ಟಣ ಇವರ ದಕ್ಸ ನಿರ್ದೇಶನದಲ್ಲಿ ಶ್ರೀ ದೇವಿ ಮಹಾತ್ಮೆ ಅಥವಾ ಮಹಿಷಾಸುರ ಮರ್ದಿನಿ ಪೌರಾಣಿಕ ನಾಟಕ
Sri Basaveshwara Kripaposita Nataka Mandali Lingapattana Halaguru Hobli, Malavalli Taluk, Mandya District on Tuesday 25.11.2025 at 11:00 am at Nalvadi Krishnaraja Wodeyar Kalamandir, Mandya, under the skillful direction of Sri Puttaswamachar Lingapattana, will present the mythological play Sri Devi Mahatme or Mahishasura Mardini.
ಪುರಾಣವೊಂದರ ಪ್ರಕಾರ-ಬ್ರಹ್ಮನ ವರಬಲದಿಂದ ಮದೋನ್ಮತ್ತನಾಗಿದ್ದ "ಮಹಿಷಾಸುರ"ನ ಸಂಹಾರ ಮಾಡಲು, ದೇವತೆಗಳೆಲ್ಲ ತಮ್ಮ ಶರೀರದ ಒಂದೊಂದು ಅಂಶವನ್ನು ತೆಗೆದು ಆದಿಶಕ್ತಿಯನ್ನು ಸೃಷ್ಟಿ ಮಾಡಿ, ಮಹಿಷನ ಮೇಲೆ ಯುದ್ದಕ್ಕೆ ಕಳುಹಿಸಿ ಅವನನ್ನು ಸಂಹಾರ ಮಾಡಲು ನೆರವಾಗುತ್ತಾರೆ.
ಹತ್ತು ದಿನಗಳಲ್ಲಿ ಸಪ್ತಮಾತೃಕೆಯರ ನೆರವಿನಿಂದ ಮಹಿಷನನ್ನು ಶಕ್ತಿ ಮತ್ತು ಯುಕ್ತಿಯಿಂದ ಕೊಲ್ಲುತ್ತಾಳೆ. ಆದುದರಿಂದಲೇ ಹತ್ತನೇಯ ದಿನ ವಿಜಯದಶಮಿಯನ್ನು ಆಚರಿಸುವುದು ರೂಢಿಯಾಗಿದೆ.
ಮಹಿಷನನ್ನು ಕೊಂದ ನಂತರ ಚಾಮುಂಡಿ ಯುದ್ದದಿಂದಾದ ಶರೀರದ ಆಯಾಸವನ್ನು ನೀಗಿಸಿ ಕೊಳ್ಳಲು, ನಂಜನಗೂಡಿನ ಕಪಿಲಾ ನದಿ ತಟಕ್ಕೆ ಬಂದು, ಮಧ್ಯರಾತ್ರಿಯಲ್ಲಿ ಸ್ನಾನ ಮಾಡಿ, ತನ್ನ ತಲೆಗೂದಲನ್ನು ಹರವಿ ಒಣಗಿಸುತ್ತಾ ಇರಬೇಕಾದರೆ, ರಾತ್ರಿ ಸಂಚಾರಕ್ಕೆ ಬಂದ ಶಿವನಂಜುಂಡೇಶ್ವರ, ಈಕೆಯಲ್ಲಿ ಅನುರಕ್ತನಾಗುತ್ತಾನೆ. ಶಿವನಿಗೆ ವಿವಾಹವಾಗಿರುವುದರ ಅರಿವಿರದ ಚಾಮುಂಡಿ ತಾನೂ ಕೂಡ ಶಿವನಲ್ಲಿ ಅನುರಕ್ತಳಾಗುತ್ತಾಳೆ.
ತದ ನಂತರ ಈ ಸುದ್ದಿ ಶಿವನ ಧರ್ಮಪತ್ನೀಯಾದ ಪಾರ್ವತಿಗೆ ಗೊತ್ತಾಗಿ ಅವಳು ಚಾಮುಂಡಿಯೊಂದಿಗೆ ಜಗಳವಾಡುತ್ತಾಳೆ. ಚಾಮುಂಡಿ-ಗೌರಿಯರ ಜಗಳ ಜನಪದ ಸಾಹಿತ್ಯದಲ್ಲಿ ನಿಚ್ಚಳವಾಗಿ ದಾಖಲಾಗಿದೆ. ಪಾರ್ವತಿಯ ಮಾತಿನಿಂದ ಮುಖಭಂಗಗೊಂಡ ಚಾಮುಂಡಿ ಮೈಸೂರಿಗೆ ಬರುವ ಹಾದಿಯಲ್ಲಿ ಆಕಸ್ಮಿಕವಾಗಿ ಸುತ್ತೂರಿನೆಡೆಗೆ ಸಾಗುತ್ತಿದ್ದ ಮಹದೇಶ್ವರನ ಬಳಿ ಹೋಗಿ ಪ್ರೇಮಭಿಕ್ಷೆ ಬೇಡುತ್ತಾಳೆ.
ಇದರಿಂದ ಕಂಗಾಲಾದ ಮಹದೇಶ್ವರ ಏನೊಂದು ಮಾತನಾಡದೆ ಚಾಮುಂಡಿಯಿಂದ ತಪ್ಪಿಸಿಕೊಳ್ಳಲು ಬಿರ ಬಿರನೆ ನಡೆದು ಹೋಗುತ್ತಾನೆ. ಪಟ್ಟು ಬಿಡದ ಚಾಮುಂಡಿಯು ಆತನನ್ನು ಹಿಂಬಾಲಿಸಿದಾಗ, ಮಹದೇಶ್ವರ ಆಕೆಯಿಂದ ತಪ್ಪಿಸಿಕೊಳ್ಳಲು ಎಪ್ಪತ್ತೇಳು ಮಲೆಯಲ್ಲಿ ನೆಲೆಸಿದನಂತೆ. ನಂತರ ಚಾಮುಂಡಿ ಬೆಟ್ಟದ ಮೇಲೆ ನೆಲೆಸಿದಳಂತೆ. ಇವಳನ್ನು ಸಿಂಹವಾಹಿನಿಯೆಂದು ಪುರಾಣಗಳಲ್ಲಿ ಬಣ್ಣಿಸಲಾಗಿದೆ.
#pragathidigitalstudiomandya #dancedrama #dramasongs
ವಿಡಿಯೋ ಚಿತ್ರೀಕರಣ ಪ್ರಗತಿ ಡಿಜಿಟಲ್ ಸ್ಟುಡಿಯೋ ಮಂಡ್ಯ
Video Shooting Pragati Digital Studio Mandya 9538028299
Доступные форматы для скачивания:
Скачать видео mp4
-
Информация по загрузке: