10ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರದ ತೀರ್ಮಾನ:ಸಿದ್ದರಾಮಯ್ಯ | Prudent Namaskara
Автор: Prudent Kannada
Загружено: 2025-11-21
Просмотров: 15651
10ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರದ ತೀರ್ಮಾನ:ಸಿದ್ದರಾಮಯ್ಯ
ಮೆಕ್ಕೆಜೋಳದ ಬೆಲೆಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನೆರವು-ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರದಿಂದ 70 ಲಕ್ಷ ಮೆ.ಟನ್ ಮೆಕ್ಕೆಜೋಳ ಆಮದು
ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.
ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ
ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ
ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.
ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ
ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.
ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು
ಕಾಂಗ್ರೆಸ್ ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್ ಗಳನ್ನು ನಾನೇ ಮಂಡಿಸುವೆ. ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದರು.
@siddaramaiahmediaofficial @IndianNationalCongress @DKShivakumarOfficial @rahulgandhi
#MaizePriceDrop #MaizeProcurement #KarnatakaFarmers #FarmersProtest #Siddaramaiah #MaizeCrisis #SupportFarmers #MaizeMSP #KarnatakaNews #MysuruNews #FarmersRights #AgricultureCrisis #CornPriceDrop #NAFED #NCCF #MaizeImportIssue #DKShivakumar #CongressGovernment #CropDamage #WeatherImpact
• Karnataka maize price drop
• CM Siddaramaiah statement Mysuru
• maize procurement Karnataka
• MSP maize Rs 2400
• farmers protest maize price
• NAFED maize procurement delay
• NCCF maize purchase issue
• central government maize import 70 lakh metric tonnes
• Karnataka maize production 55 lakh MT
• Karnataka farmers distress
• distillery maize purchase discussion
• Karnataka government to buy 10 lakh MT maize
• crop damage compensation Karnataka
• rain affected 15.5 lakh hectares Karnataka
• leadership change Congress Karnataka
• cabinet reshuffle Karnataka politics
• Mysore airport Siddaramaiah press meet
*** *** *** *** ***
ಪ್ರುಡೆಂಟ್ ನಮಸ್ಕಾರ –ಕನ್ನಡದ ಹೊಸ ಡಿಜಿಟಲ್ ಸುದ್ದಿ ವಾಹಿನಿ
ಕನ್ನಡಿಗರ ಹೃದಯಕ್ಕೆ ತಲುಪುವ ನಿಖರ ಸುದ್ದಿ, ತಾಜಾ ಅಪ್ಡೇಟ್ಸ್, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡೆ, ಮನರಂಜನೆ ಎಲ್ಲವೂ ಇಲ್ಲಿದೆ.
ಜನರ ಧ್ವನಿಯನ್ನು ತಲುಪಿಸುವ ನಿಜವಾದ ವೇದಿಕೆ
ಕರ್ನಾಟಕದ ಮೂಲೆ ಮೂಲೆಯ ಸುದ್ಧಿ – ತಕ್ಷಣ ನಿಮ್ಮ ಮೊಬೈಲ್ ಪರದೆಗೆ
ನಿಷ್ಠೆ, ನಿಖರತೆ, ನಿಜವಾದ ಪತ್ರಿಕೋದ್ಯಮ
ಎಲ್ಲ ಕಡೆ, ಎಲ್ಲ ಸಮಯ – ನಿಮ್ಮ ಪ್ರುಡೆಂಟ್ ನಮಸ್ಕಾರ!
#PrudentNamaskara #KannadaNews #KarnatakaNews #BreakingNewsKannada #DigitalNewsKannada #NamaskaraKannada #NammaKarnataka #KannadaMedia #LiveNewsKannada #VoiceOfKarnataka
Доступные форматы для скачивания:
Скачать видео mp4
-
Информация по загрузке: