ಆರ್‌ಟಿಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ; ಸಂಬಂಧಪಟ್ಟ ಅಧಿಕಾರಿಗಳ ಅಮಾನತು ಭರವಸೆ
Автор: DD Chandana News
Загружено: 2025-12-10
Просмотров: 35
ಆರ್ ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಸೇವೆಯಿಂದ ಅಮಾನತುಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ ನಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಈ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ತಪ್ಪಿಸಲು ಆನ್ಲೈ್ನ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ಇದರ ಹೊರತಾಗಿಯೂ ಮಧ್ಯವರ್ತಿಗಳು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆರ್ ಟಿಒ ಕಚೇರಿಗಳಿಗೆ ಅಲೆದಾಡಬೇಕಾದ ಅಗತ್ಯವಿಲ್ಲ. ಆನ್ಲೈುನ್ ಮೂಲಕ 24 ಸೇವೆಗಳು ಹಾಗೂ ಆಫ್ಲೈಜನ್ ಮೂಲಕ 28 ಸೇವೆಗಳು ಲಭ್ಯವಿದೆ. ಇದರಿಂದ ಮನೆಯಲ್ಲಿಯಿಂದಲೇ ಸೇವೆಯನ್ನು ಪಡೆಯಬಹುದು ಎಂದರು.
ಈಗ ಸಂಪೂರ್ಣವಾಗಿ ಮಧ್ಯವರ್ತಿಗಳ ಹಾವಳಿ ನಿಂತುಹೋಗಿದೆ ಎಂದು ಹೇಳುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ 100ಕ್ಕೆ ನೂರರಷ್ಟು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.
ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಭೂ ಪರಿವರ್ತನೆ ವಿಚಾರದಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ಕೆಲವು ಚಟುವಟಿಕೆಯಿಂದ ಸಾರ್ವಜನಿಕರಿಗೆ ಹೊರೆಯಾಗಿದೆ. ಹಾಗಾಗಿ ಈ ರೀತಿಯ ಚಟುವಟಿಕೆಗಳು ನಡೆಯದಂತೆ ತಡೆಯಲು ಆಟೋ ಪರಿವರ್ತನೆ ಮಾಡಲು ಕ್ರಮ ಕೈಕೊಳ್ಳಲಾಗಿದೆ. ನಕ್ಷೆಯಿಂದ ಹೊರಗುಳಿದ ಪ್ರದೇಶವನ್ನು ಡೀಮ್ಡ್ ಕನ್ವರ್ಷನ್ ಮಾಡಬಹುದು. ಆದರೆ 3 ರಿಂದ 4 ತಿಂಗಳು ಸಮಯ ಬೇಕಾಗುತ್ತದೆ. ಅರ್ಜಿ ಹಾಕಿದವರಿಗೆ ಅದನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಮಾಡಿಕೊಡಬೇಕು. ಅದಕ್ಕಾಗಿ 15 ದಿನಗಳ ಸಮಯಾವಕಾಶವಿರುತ್ತದೆ ಎಂದು ಹೇಳಿದರು.
ಸದಸ್ಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಜಮೀರ್ ಅಹಮದ್ ಖಾನ್, ಬಡವರಿಗೆ ಸೂರು ಕಲ್ಪಿಸುವ ವಿವಿಧ ಯೋಜನೆಗಳ ಅಡಿಯಲ್ಲಿ ಕೇಂದ್ರದಿಂದ ಬರುವ ಅನುದಾನದ ಪಾಲು ಕಡಿಮೆ ಬಂದಿದೆ, ಹಾಗಾಗಿ ಮುಖ್ಯಮಂತ್ರಿಳ ಜೊತೆ ಚರ್ಚಿಸಿ ಮುಂದಿನ ಜನವರಿಯಲ್ಲಿ 42 ಸಾವಿರ ಮನೆಗಳನ್ನು ಹಂಚಲು ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳಿಗೆ ವಸತಿ ಯೋಜನೆಗಳಲ್ಲಿ ನೀಡಲಾಗುತ್ತಿರುವ ಅನುದಾನ ಮೊತ್ತವನ್ನು ಬಜೆಟ್ ನಲ್ಲಿ ಮುಖ್ಯಮಂತ್ರಿ ಅವರು ಹೆಚ್ಚಿಸಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಡಿ ಮುಂದಿನ ಜನವರಿ ತಿಂಗಳಲ್ಲಿ ಬಾಕಿ ಇರುವ ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು. ಎಂದು ತಿಳಿಸಿದರು.
ಗೃಹ ಮಂಡಳಿ ಬಡಾವಣೆಯ ಆಸ್ತಿಗಳಿಗೆ ಮಂಡಳಿಯಿಂದಲೇ ಇ-ಖಾತಾ ನೀಡಲು ಸರ್ಕಾರದ ಆದೇಶವಾಗಿದ್ದು, ಒಂದು ತಿಂಗಳೊಳಗೆ ಇ-ಖಾತಾ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಬೆಂಗಳೂರಿನ ಸೂರ್ಯ ನಗರ ಒಂದನೇ ಹಂತದ ಬಡಾವಣೆಯಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತ ವಸತಿ ನಿಲಯಗಳಲ್ಲಿ ಖಾಲಿ ಇರುವ 234 ಹುದ್ದೆಗಳನ್ನು ಕಾಲಕಾಲಕ್ಕೆ ಅನುಗುಣವಾಗಿ ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಮಾಡಲಾಗಿರುವ ಆರೋಪಗಳ ಕುರಿತು ಸದನದಲ್ಲಿ ಗಂಭೀರ ಚರ್ಚೆ ನಡೆಯಿತು.
ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ಸದಸ್ಯರು ತಮಗೆ ತಾವೇ ಕಡಿವಾಣ ಹಾಕಿಕೊಳ್ಳಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.
ಸಭಾಪತಿಗಳು ಮತ್ತು ಅವರ ಪೀಠದ ಬಗ್ಗೆ ಅಗೌರವವಾಗಿ ಮಾತನಾಡುವುದು, ಚಾರಿತ್ರ್ಯಹರಣ ಮಾಡದೆ ಪೀಠದ ಗೌರವವನ್ನು ಎಲ್ಲರೂ ಎತ್ತಿಹಿಡಿಯಬೇಕು ಎಂದು ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಸಲಹೆ ನೀಡಿದರು.
#LiveDDChandanaNews #DDChandanaNews #DDChandana #DDKannada
Доступные форматы для скачивания:
Скачать видео mp4
-
Информация по загрузке: